ಹುಣಸೂರು: ನಾಗರಹೊಳೆ ಅರಣ್ಯದಂಚಿನ ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ಹೊಲಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ.
ಹನಗೋಡು ಹೋಬಳಿ ಚಿಕ್ಕಹೆಜ್ಜೂರು ಗ್ರಾಮದಲ್ಲಿರುವ ಬೆಂಗಳೂರು ನಿವಾಸಿ ಅರುಣ್ ಎಂಬುವವರ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಅರಣ್ಯದಿಂದ ಮೇವು ಹುಡುಕಿ ತೋಟಕ್ಕೆ ಲಗ್ಗೆ ಇಟ್ಟ ಜಿಂಕೆ ಕೊಂಬು ಸಿಲುಕು ನಿತ್ರಾಣಗೊಂಡಿದೆ.
ವಿಷಯ ತಿಳಿದ ಸ್ಥಳೀಯರು ಅರಣ್ಯ ಇಲಾಖೆ ಗಮನಕ್ಕೆ ತಂದಾಗ ಸ್ಥಳಕ್ಕೆ ಸಿಬ್ಬಂದಿ ನವೀನ್ ಭೇಟಿ ನೀಡಿ ಪರಿಶೀಲಿಸಿ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದರು. ಬೇಸಿಗೆ ಆರಂಭವಾಗುತ್ತಿದ್ದಂತೆ ನಾಗರಹೊಳೆ ಅರಣ್ಯದಿಂದ ನೀರು ಮತ್ತು ಮೇವಿಗಾಗಿ ಜಿಂಕೆ ಸೇರಿದಂತೆ ಕೆಲವು ಪ್ರಾಣಿಗಳು ತೋಟಗಳಿಗೆ ಲಗ್ಗೆ ಹಾಕುತ್ತಿದ್ದು, ಈ ಸಾಲಿನಲ್ಲಿ ಈಗಾಗಲೇ ಮೂರು ಜಿಂಕೆ ವಿವಿಧ ಕಾರಣಗಳಿಂದ ಅರಣ್ಯದಾಚೆ ಮೃತಪಟ್ಟಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…