ಬಂಟ್ವಾಳ: ಬೈಕ್ ಅಪಘಾತದಲ್ಲಿ ಮೃತರಾದ ಯುವ ನ್ಯಾಯವಾಧಿ ಪ್ರಥಮ್ ಬಂಗೇರ ಅವರಿಗೆ ವಕೀಲರ ಸಂಘ ಬಂಟ್ವಾಳ (ರಿ.) ಇವರ ವತಿಯಿಂದ ಬಿ.ಸಿ.ರೋಡಿನ ನ್ಯಾಯಾಲಯದಲ್ಲಿರುವ ಬಾರ್ ಅಸೋಸಿಯೇಶನ್ ನಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು.
ನುಡಿ ನಮನ ಸಲ್ಲಿಸಿದ ಹಿರಿಯ ಸಿವಿಲ್ ನ್ಯಾಯಧೀಶೆ,ಜೆ.ಎಮ್.ಎಫ್.ಸಿ.ಬಂಟ್ವಾಳ, ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇದರ ಅಧ್ಯಕ್ಷೆ ಭಾಗ್ಯಮ್ಮ ಅವರು, ಮಾತನಾಡಿ ವಾಹನಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ನಿಯಮಗಳನ್ನು ಮೀರಿ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸಿ,ಸಾವು ನೋವುಗಳು ಉಂಟಾಗುತ್ತವೆ. ಯುವ ವಕೀಲರು ಸಂಚಾರಿ ನಿಯಮ ಪಾಲನೆಯ ಅರಿವು ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದು ಅವರು ತಿಳಿಸಿದರು.
ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂಬ ವಿಚಾರವನ್ನು ತಿಳಿಸಿದ ಅವರು ಜೀವಕ್ಕಿರುವ ಬೆಲೆಯ ಬಗ್ಗೆ ಮತ್ತು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಮ್.ಎಫ್.ಸಿ.ಬಂಟ್ವಾಳ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಪ್ರಭಾರ ಸದಸ್ಯ ಕಾರ್ಯದರ್ಶಿ ಕೃಷ್ಣಮೂರ್ತಿ ಎನ್. ಅವರು ಮಾತನಾಡಿ, ಸಂಚಾರದ ವೇಳೆ ನಿಯಮ ಪಾಲನೆ ಜೊತೆ ಜಾಗರೂಕತೆಯಿಂದ ಮತ್ತು ನಿಧಾನವಾಗಿ ಚಲಿಸುವ ಬಗ್ಗೆ ತಿಳಿಸಿದರು.
ಬಂಟ್ವಾಳ ವಕೀಲರ ಸಂಘ( ರಿ.) ಇದರ ಅಧ್ಯಕ್ಷ ರಿಚರ್ಡ್ ಕೊಸ್ತಾ ಅವರು ಮಾತನಾಡಿ, ಪ್ರಥಮ್ ನ ಸಾವಿನ ದುಖ:ವನ್ನು ಸಹಿಸುವ ಶಕ್ತಿಯನ್ನು ಕುಟುಂಬ ವರ್ಗಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದ ಅವರು ಅಂಗಾಗ ದಾನ ಮಾಡಿದ ಯುವ ವಕೀಲ ಪ್ರಥಮ್ ಬಂಗೇರ ಅವರು ಸಾವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು.
ಪ್ರತಿಯೊಬ್ಬರೂ ಕೂಡ ಆರೋಗ್ಯ ವಿಮೆಯನ್ನು ಮಾಡಬೇಕೆಂದು ಅವರು ತಿಳಿಸಿದರು.
ಇಂತಹ ಅವಘಡಗಳು ಸಂಭವಿಸಿದಾಗ ಆರೋಗ್ಯ ವಿಮೆ ಕುಟುಂಬಕ್ಕೆ ಆಧಾರಸ್ತಂಭವಾಗಬಹುದು ಎಂಬ ಮಾತನ್ನು ಅವರು ಉಲ್ಲೇಖ ಮಾಡಿದರು.
ಹಿರಿಯ ಕಿರಿಯ ಹಾಗೂ ಪ್ರಥಮ್ ನ ವಕೀಲ ಸ್ನೇಹಿತರು ನುಡಿ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಹಾಗೂ ಕಿರಿಯ ವಕೀಲರು ಉಪಸ್ಥಿತರಿದ್ದರು.
ಗಿರೀಶ್ ಮುಲಿಯಾಲ ಕಾರ್ಯಕ್ರಮ ನಿರೂಪಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…