ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆ

 

ಇಲ್ಲಿನ ಸಂಪೀಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಬೆಳ್ಳಳ್ಳಿಯ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್​ನಲ್ಲಿ ಹ್ಯಾಂಡ್ ಗ್ರನೇಡ್ ಸಿಕ್ಕಿದೆ.

ಹೋಟೆಲ್​ ಸಿಬ್ಬಂದಿಯೊಬ್ಬರು, ಆಧಾರ್​ ಕಾರ್ಡ್​ಗಾಗಿ ಅಬ್ದುಲ್ ರೆಹಮಾನ್​ನ ಬ್ಯಾಗ್​ ಪರಿಶೀಲಿಸಿದಾಗ ಗ್ರೇನೆಡ್ ಪತ್ತೆಯಾಗಿದೆ. ಕೂಡಲೇ ಹೋಟೆಲ್​ನವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಸಂಪೀಗೆಹಳ್ಳಿ ಪೊಲೀಸರು ಮೊದಲಿಗೆ ಹೋಟೆಲ್​ನವರಿಂದ ಮಾಹಿತಿ ಪಡೆದುಕೊಂಡು ನಂತರ ರೆಹಮಾನ್ ಬ್ಯಾಗ್​ ಚೆಕ್​ ಮಾಡಿದಾಗ ಹ್ಯಾಂಡ್ ಗ್ರನೇಡ್ ಕಂಡುಬಂದಿದೆ.

ಸದ್ಯ ಅಬ್ದುಲ್ ರೆಹಮಾನ್ ಹಾಗೂ ಈತನ ಬ್ಯಾಗ್​ನಲ್ಲಿ ಸಿಕ್ಕ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ಮಾದರಿಯ ಸ್ಫೋಟಕವನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮತ್ತೊಂದೆಡೆ ಕೋಗಿಕ್ರಾಸ್ ಬಳಿಯ ಬೆಳ್ಳಳ್ಳಿಯ ನಿವಾಸಿಯಾಗಿರುವ ಅಬ್ಧುಲ್ ರೆಹಮಾನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳೊಡಿಸಿದ್ದಾರೆ.

ಅಬ್ದುಲ್ ರೆಹಮಾನ್ ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಹೇಳಿಕೊಂಡು ವೈಭವ್ ಹೋಟೆಲ್​ನಲ್ಲಿ ಸಪ್ಲೈಯರ್​​ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಬಳಿಕ ಹೋಟೆಲ್​ನವರು ಆಧಾರ್ ಕಾರ್ಡ್ ಕೇಳಿದ್ದಾರೆ. ಆದ್ರೆ ಆತ ಕಾರ್ಡ್ ಕೇಳಿದಾಗ ಕೊಟ್ಟಿಲ್ಲ. ಎರಡು ದಿನಗಳು ಕಳೆದರೂ ಸಹ ಆಧಾರ್ ಕಾರ್ಡ್​​ ಕೊಟ್ಟಿಲ್ಲ. ಇದರಿಂದ ಹೋಟೆಲ್​ ಸಿಬ್ಬಂದಿಯೊಬ್ಬರು ಶೆಡ್​​ನಲ್ಲಿದ್ದ ರೆಹಮಾನ್​​ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!