ಇಲ್ಲಿನ ಸಂಪೀಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್ವೊಂದ ಸಪ್ಲೈಯರ್ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಬೆಳ್ಳಳ್ಳಿಯ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್ನಲ್ಲಿ ಹ್ಯಾಂಡ್ ಗ್ರನೇಡ್ ಸಿಕ್ಕಿದೆ.
ಹೋಟೆಲ್ ಸಿಬ್ಬಂದಿಯೊಬ್ಬರು, ಆಧಾರ್ ಕಾರ್ಡ್ಗಾಗಿ ಅಬ್ದುಲ್ ರೆಹಮಾನ್ನ ಬ್ಯಾಗ್ ಪರಿಶೀಲಿಸಿದಾಗ ಗ್ರೇನೆಡ್ ಪತ್ತೆಯಾಗಿದೆ. ಕೂಡಲೇ ಹೋಟೆಲ್ನವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಸಂಪೀಗೆಹಳ್ಳಿ ಪೊಲೀಸರು ಮೊದಲಿಗೆ ಹೋಟೆಲ್ನವರಿಂದ ಮಾಹಿತಿ ಪಡೆದುಕೊಂಡು ನಂತರ ರೆಹಮಾನ್ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಕಂಡುಬಂದಿದೆ.
ಸದ್ಯ ಅಬ್ದುಲ್ ರೆಹಮಾನ್ ಹಾಗೂ ಈತನ ಬ್ಯಾಗ್ನಲ್ಲಿ ಸಿಕ್ಕ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ಮಾದರಿಯ ಸ್ಫೋಟಕವನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮತ್ತೊಂದೆಡೆ ಕೋಗಿಕ್ರಾಸ್ ಬಳಿಯ ಬೆಳ್ಳಳ್ಳಿಯ ನಿವಾಸಿಯಾಗಿರುವ ಅಬ್ಧುಲ್ ರೆಹಮಾನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳೊಡಿಸಿದ್ದಾರೆ.
ಅಬ್ದುಲ್ ರೆಹಮಾನ್ ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಹೇಳಿಕೊಂಡು ವೈಭವ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಬಳಿಕ ಹೋಟೆಲ್ನವರು ಆಧಾರ್ ಕಾರ್ಡ್ ಕೇಳಿದ್ದಾರೆ. ಆದ್ರೆ ಆತ ಕಾರ್ಡ್ ಕೇಳಿದಾಗ ಕೊಟ್ಟಿಲ್ಲ. ಎರಡು ದಿನಗಳು ಕಳೆದರೂ ಸಹ ಆಧಾರ್ ಕಾರ್ಡ್ ಕೊಟ್ಟಿಲ್ಲ. ಇದರಿಂದ ಹೋಟೆಲ್ ಸಿಬ್ಬಂದಿಯೊಬ್ಬರು ಶೆಡ್ನಲ್ಲಿದ್ದ ರೆಹಮಾನ್ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…