ಇತರೆ

ಉತ್ತರ ಪ್ರದೇಶ: ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ

ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ವ್ಯಕ್ತಿಗೆ ತುಂಬಾ ದಿನಗಳಿಂದ ಹೊಟ್ಟೆ ನೋವು ಬರುತ್ತಿತ್ತು, ಹಲವು ವೈದ್ಯರನ್ನು ಸಂಪರ್ಕಿಸಿದರೂ ಸಮಸ್ಯೆ ಪರಿಹಾರವಾಗದಿದ್ದಾಗ ತನಗೆ ತಾನೇ ಸರ್ಜರಿ ಮಾಡಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಿದ್ದ. ಯೂಟ್ಯೂಬ್‌ನಲ್ಲಿ ಹಲವಾರು ವೀಡಿಯೊಗಳನ್ನು ನೋಡಿದ ನಂತರ, ಔಷಧ ಅಂಗಡಿಯಿಂದ ಔಷಧಿಗಳನ್ನು ಖರೀದಿ ಮಾಡಿದ್ದ.

ನಂತರ ಯೂಟ್ಯೂಬ್​ನಲ್ಲಿ ನೋಡಿದ ಆಧಾರದ ಮೇಲೆ ಸ್ವತಃ ಶಸ್ತ್ರಚಿಕಿತ್ಸೆಗೆ ಪ್ರಯತ್ನಿಸಿದ್ದು ಅವರ ಸ್ಥಿತಿ ಹದಗೆಟ್ಟಾಗ, ಅವರ ಕುಟುಂಬವು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿತು.

ರಾಜಾ ಬಾಬು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ವೈದ್ಯರನ್ನು ಸಂಪರ್ಕಿಸಿದ ನಂತರವೂ ಅವರ ನೋವು ಕಡಿಮೆಯಾಗಲಿಲ್ಲ. ನೋವು ಅಸಹನೀಯವಾದಾಗ, ಅವರು ಮಥುರಾಗೆ ಹೋಗಿ ಶಸ್ತ್ರಚಿಕಿತ್ಸಾ ಬ್ಲೇಡ್, ಹೊಲಿಗೆ ಸಾಮಗ್ರಿಗಳು ಮತ್ತು ಅರಿವಳಿಕೆ ಇಂಜೆಕ್ಷನ್‌ಗಳನ್ನು ಖರೀದಿಸಿದ್ದ. ಬುಧವಾರ ತಮ್ಮ ಕೋಣೆಯಲ್ಲಿ ಕುಳಿತು ಶಸ್ತ್ರ ಚಿಕಿತ್ಸೆ ಮಾಡಲು ಪ್ರಾರಂಭಿಸಿದ್ದ.

ಸ್ವಲ್ಪ ಸಮಯದ ಬಳಿಕ ಅರವಳಿಕೆ ಪರಿಣಾಮ ಕಡಿಮೆಯಾದಾಗ ತೀವ್ರ ನೋವು ಶುರುವಾಗಿ ಅರಚಲಾರಂಭಿಸಿದ್ದರು. ಕೂಡಲೇ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ರಾಜಾ ಬಾಬು ಅವರಿಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು ಎಂದು ಮನೆಯವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಮತ್ತು ಹಲವಾರು ವೈದ್ಯರನ್ನು ಸಂಪರ್ಕಿಸಿದರೂ ಯಾವುದೇ ಪರಿಹಾರ ಸಿಗಲಿಲ್ಲ. ಆಗ ರಾಜಾ ಬಾಬು ಸ್ವತಃ ಚಿಕಿತ್ಸೆ ಪಡೆಯಲು ನಿರ್ಧರಿಸಿದರು.

ಆದರೆ, ಅವರ ಸ್ಥಿತಿ ಹದಗೆಟ್ಟಂತೆ, ಹೆಚ್ಚಿನ ಚಿಕಿತ್ಸೆಗಾಗಿ ರಾಜಾ ಬಾಬು ಅವರನ್ನು ಆಗ್ರಾದ ಎಸ್‌ಎನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

10 mins ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

14 mins ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

19 mins ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

6 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

6 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago