ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಬಸ್ ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಕ್ಕೆ ಅನ್ಯಾಯವಾದಾಗ ಖಾಸಗಿ ಬಸ್ ಮಾಲಕರು ಒಟ್ಟಿಗೆ ಇದ್ದೇವೆ. ಆದರೆ, ಸಾರ್ವಜನಿಕರಿಗೆ ತೊಂದರೆ ಆಗುವುದರಿಂದ ಯಾವುದೇ ಖಾಸಗಿ ಬಸ್ ಗಳ ಬಂದ್ ಇರುವುದಿಲ್ಲ. ಎಲ್ಲ ಬಸ್ ಗಳು ಎಂದಿನಂತೆ ಓಡಾಡಲಿವೆ. ಬಂದ್ ಗೆ ನೈತಿಕ ಬೆಂಬಲ ಸೂಚಿಸಿದ್ದೇವೆ ಎಂದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…