ಮಂಗಳೂರು: ವೃತ್ತಪತ್ರಿಕೆ ವಿತರಕರೊಬ್ಬರು ದುಬಾರಿ ಮೊಬೈಲ್ ಫೋನ್ ಅನ್ನು ಅದರ ಮಾಲಕರಿಗೆ ಹಿಂದಿರುಗಿಸಿದ್ದಾರೆ. ಅವರ ಈ ಪ್ರಾಮಾಣಿಕತೆಯ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಜೋಯಲ್ ಅವರು, ಸುಮಾರು ೧.೨೫ ಲಕ್ಷ ರೂಪಾಯಿ ಮೌಲ್ಯದ ತನ್ನ ಐಫೋನ್ ಕಳೆದುಕೊಂಡಿದ್ದರು. ಅವರ ಈ ಫೋನ್ ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ವೃತ್ತಪತ್ರಿಕೆ ವಿತರಕ ರಮೇಶ್ ಅವರಿಗೆ ಸಿಕ್ಕಿತ್ತು.
ಆದರೆ ರಮೇಶ್ ಅವರು ಈ ಫೋನ್ ಇಟ್ಟುಕೊಳ್ಳದೇ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಇದರಿಂದಾಗಿ ಫೋನ್‌ನ ನಿಜವಾದ ಮಾಲಕರನ್ನು ಪತ್ತೆಹಚ್ಚಲು ಸಹಾಯವಾಯಿತು. ಈ ಫೋನ್ ಅನ್ನು ಜೋಯಲ್ ಅವರದ್ದೇ ಎಂದು ಖಚಿತಪಡಿಸಿಕೊಂಡ ರಮೇಶ್ ಅವರು ತಕ್ಷಣವೇ ಅವರಿಗೆ ಹಸ್ತಾಂತರಿಸಿದ್ದಾರೆ. ರಮೇಶ್ ಅವರು ಪ್ರಾಮಾಣಿಕತೆಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…