ಬಂಟ್ವಾಳ: ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದರು.
ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳಿಂದ ಗ್ರಾಮ ಸ್ವಚ್ಛತೆಗೆ ಅಡ್ಡಿಯಾಗಿದ್ದು, ಪರಿಚಯ ಇಲ್ಲದವರಿಗೆ ಬಾಡಿಗೆ ನೀಡಿರುವುದರಿಂದ ಕ್ರಮ ಚಟುವಟಿಕೆಗಳು ನಡೆಯುತ್ತಿದೆ,ಬಾಡಿಗೆ ಮನೆ ನೀಡುವಾಗ ಸೂಕ್ತ ದಾಖಲಾತಿ ಪಡೆದು ಗ್ರಾಮ ಪಂಚಾಯತಿಗೆ ಮಾಹಿತಿ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.ವೀರಕಂಬ ಗ್ರಾಮದಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಲು ಕಾದಿರಿಸಿದ ಜಾಗದಲ್ಲಿ ಶೀಘ್ರವೇ ಆರೋಗ್ಯ ಉಪ ಕೇಂದ್ರ ರಚಿಸಬೇಕು, ಗ್ರಾಮದಲ್ಲಿರುವ ಗೋಮಾಲ ಜಾಗವನ್ನು ಗಡಿ ಗುರುತು ಮಾಡಬೇಕು, ಘಣ ತ್ಯಾಜ್ಯ ಘಟಕ ಕೂಡಲೇ ಉದ್ಘಾಟಿಸಿ, ರಸ್ತೆ ಬದಿಯಲ್ಲಿ ಕಸ ಎಸೆಯುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.
ಗ್ರಾಮಸ್ಥರಿಗೆ ವಿವಿಧ ಇಲಾಖೆಗಳಾದ ಅರೋಗ್ಯ,ಮೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನ ಇಲಾಖೆ, ತೋಟಗಾರಿಕಾ ಇಲಾಖೆ ವತಿಯಿಂದ ಗ್ರಾಮಸ್ಥರಿಗೆ ಇಲಾಖಾವಾರು ಮಾಹಿತಿ ನೀಡಿದರು.
ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ತೊಡೆಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರದೀಪ್ ಭಾಗವಹಿಸಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಗ್ರಾಮಸ್ಥರು ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಲಿತ,ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯರುಗಳು, ವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಪಂಚಾಯತ್ ಸಿಬ್ಬಂದಿಗಳು,ಗ್ರಾಮಸ್ಥರು ಭಾಗವಹಿಸಿದ್ದರು.
ಮಜಿ ಶಾಲಾ ಮಕ್ಕಳು ನಾಡಗೀತೆ ಹಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ ಎಂ ಸ್ವಾಗತಿಸಿ, ಕಾರ್ಯದರ್ಶಿ ಸವಿತಾ ವಂದಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…