ಜನ ಮನದ ನಾಡಿ ಮಿಡಿತ

Advertisement

ಪತ್ನಿಯ ಎದುರೇ ಪತಿಯ ದಾರುಣ ಹತ್ಯೆ; 4 ತಿಂಗಳ ಹಿಂದೆಯಷ್ಟೇ ನಡೆದಿತ್ತು ಮದುವೆ!

ಬೆಳಗಾವಿ: ಪತ್ನಿ ಎದುರೇ ಪತಿ ಮೇಲೆ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಂಕರ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಇಂದು ಅಮಾವಾಸ್ಯೆ ನಿಮಿತ್ತ ವಡೇರಟ್ಟಿ ಗ್ರಾಮದ ಬಾಣಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕಾ ಅವರೊಂದಿಗೆ ಆಗಮಿಸಿದ್ದ ವೇಳೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಮೂರು ತಿಂಗಳ ಹಿಂದಷ್ಟೇ ಶಂಕರ್ ಮದುವೆಯಾಗಿದ್ದರು. ಇಂದು ದೇವಸ್ಥಾನಕ್ಕೆ ಬಂದಾಗ ಪತ್ನಿಯ ಮುಂದೆಯೇ ದುಷ್ಕರ್ಮಿಗಳು ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಪತ್ನಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪತಿಯ ಹತ್ಯೆಯನ್ನು ಕಣ್ಣಾರೆ ಕಂಡ ಪ್ರಿಯಾಂಕಾ ಪ್ರತಿಕ್ರಿಯಿಸಿ, ನಿನ್ನೆ ತಡರಾತ್ರಿ ನನ್ನ ಪತಿ ನನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇಂದು ಬೆಳಗ್ಗೆ ನನ್ನನ್ನು ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದರು. ಬೈಕ್ ತಿರುಗಿಸಿಕೊಂಡು ಬರ್ತಾರೆ ಅಂತ ನಾನು ಮುಂದೆ ಹೋಗಿ ನಿಂತುಕೊಂಡಿದ್ದೆ. ಅಷ್ಟರಲ್ಲಿ ಲಾಂಗ್ ಹಿಡಿದುಕೊಂಡು ಬಂದ ಒಬ್ಬ ವ್ಯಕ್ತಿ ಗಂಡನ ಮೇಲೆ ಹಲ್ಲೆ ಮಾಡಿ ಪರಾರಿಯಾದ. ನಾನು ಓಡಿ ಹೋಗುವಷ್ಟರಲ್ಲಿ ಅವರು ಕೆಳಗೆ ಬಿದ್ದಿದ್ದರು” ಎಂದು ಘಟನೆಯನ್ನು ವಿವರಿಸಿದರು. “ಮದುವೆಯಾಗಿ ಇದೇ 19ನೇ ತಾರೀಕಿಗೆ ನಾಲ್ಕು ತಿಂಗಳು ಪೂರ್ಣವಾಗುತ್ತಿತ್ತು” ಎಂದು ಅವರು ಕಣ್ಣೀರು ಸುರಿಸಿದರು. ಮೂಡಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!