ಜನ ಮನದ ನಾಡಿ ಮಿಡಿತ

Advertisement

ಶಿರ್ವ: ಬೈಕ್ ಗೆ ಕಾರು ಢಿಕ್ಕಿ; ಸವಾರ ಮೃತ್ಯು….!

ಉಡುಪಿ: ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.

ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್‌ ಮೂಲ್ಯ (51) ಎಂಬವರು ಅಪಘಾತದಲ್ಲಿ ಮೃತಪಟ್ಟಿದ್ದು, ಪುತ್ರನ ಸಾವಿನ ಸುದ್ದಿ ತಿಳಿದು ತಾಯಿ ಇಂದಿರಾ ಮೂಲ್ಯ (74) ಅವರು ಕೊನೆಯುಸಿರೆಳೆದಿದ್ದಾರೆ. ರಮೇಶ್ ಅವರು ಮಾರ್ಚ್ 23ರಂದು ಬಂಟಕಲ್ಲಿನಿಂದ ಬಿ.ಸಿ. ರೋಡ್ ಪಾಂಬೂರು ಮಾರ್ಗವಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಮೇಶ್ ಮೂಲ್ಯ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 24ರಂದು ರಾತ್ರಿ ಮೃತಪಟ್ಟಿದ್ದರು.

ಅಪಘಾತದಿಂದ ಮೃತಪಟ್ಟ ರಮೇಶ್ ಅವರ ಮೃತ ದೇಹವನ್ನು ಅವರ ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!