ಉಡುಪಿ: ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.
ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51) ಎಂಬವರು ಅಪಘಾತದಲ್ಲಿ ಮೃತಪಟ್ಟಿದ್ದು, ಪುತ್ರನ ಸಾವಿನ ಸುದ್ದಿ ತಿಳಿದು ತಾಯಿ ಇಂದಿರಾ ಮೂಲ್ಯ (74) ಅವರು ಕೊನೆಯುಸಿರೆಳೆದಿದ್ದಾರೆ. ರಮೇಶ್ ಅವರು ಮಾರ್ಚ್ 23ರಂದು ಬಂಟಕಲ್ಲಿನಿಂದ ಬಿ.ಸಿ. ರೋಡ್ ಪಾಂಬೂರು ಮಾರ್ಗವಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಮೇಶ್ ಮೂಲ್ಯ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 24ರಂದು ರಾತ್ರಿ ಮೃತಪಟ್ಟಿದ್ದರು.
ಅಪಘಾತದಿಂದ ಮೃತಪಟ್ಟ ರಮೇಶ್ ಅವರ ಮೃತ ದೇಹವನ್ನು ಅವರ ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃತಪಟ್ಟಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…