ಅಂತ್ಯ ಸಂಸ್ಕಾರ ಮುಗಿಸಿ ಹಿಂದಿರುಗುವಾಗ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ನಡೆದಿದೆ.

ಅಂತ್ಯ ಸಂಸ್ಕಾರ ಮುಗಿಸಿ ಬಾಳೆಹೊನ್ನೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಹಾಗೂ ಚಿಕ್ಕಮಗಳೂರಿನಿಂದ ಬಾಳೆಹೊನ್ನೂರಿಗೆ ಹೋಗುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಚಕ್ರಗಳು ತುಂಡು-ತುಂಡಾಗಿ ಬಿದ್ದಿದೆ. ಜೊತೆಗೆ ಟಿಪ್ಪರ್ ಲಾರಿಯ ಆಕ್ಸೆಲ್ ತುಂಡಾಗಿ ಕಂದಕಕ್ಕೆ ಇಳಿದಿದೆ. ಸದ್ಯ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



