ಮಿಜೋರಾಂನ ಲಾಂಗ್ ಟಲಾಯಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭಾವಿಯಿಸ್ದ ಬೆಂಕಿ ಅವಘಡದಲ್ಲಿ ಕನಿಷ್ಠ 8 ಮನೆಗಳು ಹಾಗೂ 4 ಅಂಗಡಿಗಳು ಸುಟ್ಟುಹೋಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಡಿಲ್ಟಲಂಗ್ ಗ್ರಾಮದಲ್ಲಿ ಬೆಳಗಿನ ಜಾವ 1.30 ರ ಸುಮಾರಿಗೆ ಅವಘಡ ಸಂಭವಿಸಿದೆ. ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಬೆಂಕಿ ನಂದಿಸಲಾಗಿದೆ.



