ಗ್ರಾಹಕರಿಗೆ ಮತ್ತೆ ನಂದಿನ ಹಾಲಿನ ಬೆಲೆ ಏರಿಕೆ ಬಿಸಿ ತಟ್ಟಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಯನ್ನು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನದ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್‌ಗೆ 2 ರೂ ಏರಿಕೆ ಮಾಡಲಾಗಿತ್ತು. ಆದರೆ, ಇದೀಗ ಲೀಟರ್‌ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆ ದೊಡ್ಡ ಹೊರೆಯಾದಂತಾಗಿದೆ.
ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದ್ರೆ ಇದೀಗ ಸಚಿವ ಸಂಪುಟ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ. ಇದೇ ಏಪ್ರಿಲ್ 1 ರಿಂದ ಪರಿಷ್ಕೃತ ದರ ಜಾರಿ ಬರಲಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…