ಮಂಗಳೂರು;ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ 29, ಶನಿವಾರದಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.

ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸುತ್ತಾರೆ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಉಪಸ್ಥಿತರಿರುತ್ತಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಮತ್ತು ಮುಂಬಯಿಯ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ವಿ.ಎನ್.ರಾಜಶೇಖರನ್ ಪಿಳ್ಳೆöÊ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸ ಭಾಷಣ ಮಾಡುತ್ತಾರೆ ಎಂದು ತಿಳಿಸಿದ್ರು.
ಘಟಿಕೋತ್ಸವದಲ್ಲಿ ಉದ್ಯಮಿ ಸಮಾಜ ಸೇವಕ, ದಾನಿ, ಟೆಕ್ನೋಕ್ರಾಟ್ ಕನ್ಯಾನ ಸದಾಶಿವ ಶೆಟ್ಟಿ,

ಸಹಕಾರ ರಂಗದ ಧೀಮಂತ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ ಮೂಲಸೌಕರ್ಯವನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತಿರುವ ಉದ್ಯಮಿ ರೋಹನ್ ಮೊಂತೆರೋ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸಲಾಗುತ್ತಿದೆ.

ರಾಜ್ಯಪಾಲರಿಂದ ರಚಿಸಲಾದ ತಜ್ಞರ ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ ಈ ಮೂವರನ್ನು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.



