ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಪ್ರಕರಣ: ಹಂತಕ ಪತಿ ಬಂಧನ

ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.

ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಆಕೆ ದೇಹವನ್ನು ತುಂಡರಿಸಿ ಟ್ರಾಲಿ ಬ್ಯಾಗ್​​​ ತುಂಬಿಟ್ಟು ಪರಾರಿಯಾಗಿದ್ದ.

ಹುಳಿಮಾವು ಪೊಲೀಸರು ಸಿಡಿಆರ್​ ಆಧರಿಸಿ ಮಹಾರಾಷ್ಟ್ರದ ಪುಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಶೋಧಕಾರ್ಯ ನಡೆಸಿದಾಗ ರಾಕೇಶ್ ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಪುಣೆ ಪೊಲಿಸರ ವಶದಲ್ಲಿರುವ ರಾಕೇಶ್ ನನ್ನು ಬೆಂಗಳೂರಿಗೆ ಕರೆತರಲು ಹುಳಿಮಾವು ಪೊಲೀಸರ ತಂಡ ಪುಣೆಗೆ ತೆರಳುತ್ತಿದ್ದು, ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ಬೆಂಗಳೂರಿಗೆ ಕರೆತರಲಿದ್ದಾರೆ. ನಂತರ ಪತ್ನಿಯ ಹತ್ಯೆ ಮಾಡಿದ ಕಾರಣ ತಿಳಿದುಕೊಳ್ಳಲು ಪೊಲೀಸರು ಆತನನನ್ನು ವಿಚಾರಣೆ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!