ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸಲಾದ ವಾರ್ಷಿಕ ವಂದನಾ ಪ್ರಶಸ್ತಿ -2025ನ್ನು ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಮಾ.28 ರಂದು ರಾತ್ರಿ 8 ಗಂಟೆಗೆ ಮಂಗಳೂರಿನ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೊಟೇಲ್ ಉದ್ಯಮದಲ್ಲಿ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಹಾಗೂ ಅಮೂಲ್ಯ ಕೊಡುಗೆ ಮತ್ತು ಗಣನೀಯ ಸಾಧನೆಯ ಫಲವಾಗಿ ಪ್ರಶಸ್ತಿ ದೊರಕಿದೆ.
ರೋಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ಪ್ರತಿಷ್ಠಿತ ವಂದನಾ ಪ್ರಶಸ್ತಿಗೆ ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ವಿಜ್ಞಾನ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ರೋಟರಿ ಸಂಸ್ಥೆಯ ವೃತ್ತಿಪರ ಜೀವೆ ಯೋಜನೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಕೆ.ಪ್ರಕಾಶ್ ಶೆಟ್ಟಿ ಈ ವಂದನಾ ಪ್ರಶಸ್ತಿ ಇದುವರೆಗೂ ಸಿಕ್ಕಿದ ಪ್ರಶಸ್ತಿಗಳಲ್ಲಿ ಬಹಳ ಶ್ರೇಷ್ಠವಾದದ್ದು ಎಂದು ಭಾವಿಸುತ್ತೇನೆ. ಅದೃಷ್ಟದ ಜೊತೆ ಪ್ರಯತ್ನಗಳು ಸೇರಿದಾಗ ಮಾತ್ರ ಸಾಧನೆಯಗಿ ಪರಿವರ್ತನೆಯಗಲು ಸಾಧ್ಯ ಎಂದರು .
ಈ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಬ್ರಿಯಾನ್ ಪಿಂಟೊ, ರೋಟರ್ಯಾಕ್ಟ್ ಮಂಗಳೂರು ಸಿಟಿಯ ಅಧ್ಯಕ್ಷ ಬಿದ್ದಪ್ಪ ಬಿ.ಎ , ರೋಟರಿ ಜಿಲ್ಲಾ 3181ರಸಹಾಯಕ ಗವರ್ನರ್ ಕೃಷ್ಣ ಹೆಗ್ಡೆ, ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ಸಂಜಯ್ ಆರ್. ಮೊದಲಾದವರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…