ಮಂಗಳೂರು;ಇಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ತುಳುನಾಡಿನ ತ್ರಿವಳಿ ಕಣ್ಮಣಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಡಲಾಯಿತು.
ಉದ್ಯಮಿ ಸಮಾಜ ಸೇವಕ, ದಾನಿ, ಕನ್ಯಾನ ಸದಾಶಿವ ಶೆಟ್ಟಿ, ಸಹಕಾರ ರಂಗದ ಧೀಮಂತ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ ಮೂಲಸೌಕರ್ಯವನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತಿರುವ ಉದ್ಯಮಿ ರೋಹನ್ ಮೊಂತೆರೋ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸಲಾಯಿತು. ರಾಜ್ಯಪಾಲರಿಂದ ರಚಿಸಲಾದ ತಜ್ಞರ ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ ಈ ಮೂವರನ್ನು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ರು. ಸಮಾರಂಭದಲ್ಲಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್, ಕುಲಪತಿ ಪ್ರೊ. ಪಿ.ಎಲ್. ಧರ್ಮ, ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಮತ್ತು ಮುಂಬಯಿಯ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ವಿ.ಎನ್.ರಾಜಶೇಖರನ್ ಪಿಳ್ಳೆöÊ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…