ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಸ್ತೆ ಅಪಘಾತದಲ್ಲಿ ತಂದೆಯ ಕಣ್ಮುಂದೆ ಮಗನ ದುರ್ಮರಣ

ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್‌ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್‌ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್‌ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.

ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್‌ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್‌ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್‌ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!