ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್‌ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.
ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್‌ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್‌ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…