ಜನ ಮನದ ನಾಡಿ ಮಿಡಿತ

Advertisement

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ ಆಪರೇಷನ್ ಬ್ರಹ್ಮದಡಿ ಭಾರತ ಸಹಾಯಹಸ್ತ

ಭೂಕಂಪ ಪೀಡಿತ ಮ್ಯಾನ್ಮಾರ್‌ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ ಸಹಾಯ ಮಾಡಲು ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಭಾರತ ನೇಪಾಳಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಳುಹಿಸಿದೆ.

“80 ಎನ್‌ಡಿಆರ್‌ಎಫ್ ಸಿಬ್ಬಂದಿಯ ತಂಡವನ್ನು ಮ್ಯಾನ್ಮಾರ್‌ಗೆ ಕಳುಹಿಸಲಾಗುತ್ತಿದೆ. ತಂಡವು ಇಂದು ಸಂಜೆಯ ವೇಳೆಗೆ ಮ್ಯಾನ್ಮಾರ್‌ಗೆ ತಲುಪುವ ನಿರೀಕ್ಷೆಯಿದೆ” ಎಂದು ಮೂಲಗಳು ತಿಳಿಸಿವೆ. ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಅವರನ್ನು ಮುನ್ನಡೆಸಲಿದ್ದಾರೆ.

ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ಶುಕ್ರವಾರ (ಮಾರ್ಚ್ 28) ಸಂಭವಿಸಿದ ತೀವ್ರ ಭೂಕಂಪದಿಂದ ನಲುಗಿಹೋಗಿದ್ದು, ಕಟ್ಟಡಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 1,002 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತವು ಹಿಂದಿನ ಎರಡು ಸಂದರ್ಭಗಳಲ್ಲಿ ವಿದೇಶಗಳಲ್ಲಿ ಎನ್‌ಡಿಆರ್‌ಎಫ್ ಅನ್ನು ನಿಯೋಜಿಸಿತ್ತು. 2015ರ ನೇಪಾಳದ ಭೂಕಂಪ ಮತ್ತು 2023ರ ಟರ್ಕಿಯೆ ಭೂಕಂಪದ ಸಮಯದಲ್ಲಿ ಎನ್​ಡಿಆರ್​ಎಫ್​ ಅನ್ನು ಭಾರತ ನಿಯೋಜಿಸಿತ್ತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!