ಭೂಕಂಪ ಪೀಡಿತ ಮ್ಯಾನ್ಮಾರ್‌ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ ಸಹಾಯ ಮಾಡಲು ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಭಾರತ ನೇಪಾಳಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಳುಹಿಸಿದೆ.
“80 ಎನ್‌ಡಿಆರ್‌ಎಫ್ ಸಿಬ್ಬಂದಿಯ ತಂಡವನ್ನು ಮ್ಯಾನ್ಮಾರ್‌ಗೆ ಕಳುಹಿಸಲಾಗುತ್ತಿದೆ. ತಂಡವು ಇಂದು ಸಂಜೆಯ ವೇಳೆಗೆ ಮ್ಯಾನ್ಮಾರ್‌ಗೆ ತಲುಪುವ ನಿರೀಕ್ಷೆಯಿದೆ” ಎಂದು ಮೂಲಗಳು ತಿಳಿಸಿವೆ. ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಅವರನ್ನು ಮುನ್ನಡೆಸಲಿದ್ದಾರೆ.
ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ಶುಕ್ರವಾರ (ಮಾರ್ಚ್ 28) ಸಂಭವಿಸಿದ ತೀವ್ರ ಭೂಕಂಪದಿಂದ ನಲುಗಿಹೋಗಿದ್ದು, ಕಟ್ಟಡಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 1,002 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತವು ಹಿಂದಿನ ಎರಡು ಸಂದರ್ಭಗಳಲ್ಲಿ ವಿದೇಶಗಳಲ್ಲಿ ಎನ್‌ಡಿಆರ್‌ಎಫ್ ಅನ್ನು ನಿಯೋಜಿಸಿತ್ತು. 2015ರ ನೇಪಾಳದ ಭೂಕಂಪ ಮತ್ತು 2023ರ ಟರ್ಕಿಯೆ ಭೂಕಂಪದ ಸಮಯದಲ್ಲಿ ಎನ್‌ಡಿಆರ್‌ಎಫ್ ಅನ್ನು ಭಾರತ ನಿಯೋಜಿಸಿತ್ತು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…