ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ:  ಮುತ್ತೂಟ್ ಫೈನಾನ್ಸ್ ದರೋಡೆಗೆ ಪ್ರಯತ್ನ – ಇಬ್ಬರು ಆರೋಪಿಗಳ ಬಂಧನ

ದೇರಳಕಟ್ಟೆಯಲ್ಲಿರುವ ಮತ್ತೂಟ್ ಫೈನಾನ್ಸ್ ದರೋಡೆಗೆತ್ನಿಸುತ್ತಿದ್ದಾಗಲೇ ಸೈರನ್ ಮೊಳಗಿದ ಪರಿಣಾಮ ಇಬ್ಬರು ಕೇರಳ ಮೂಲದ ದರೋಡೆಕೋರರು ಲಾಕ್ ಆದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಕೇರಳ ರಾಜ್ಯದ ಕಾಂಞಂಗಾಡ್ ನಿವಾಸಿ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಕಟ್ಟಡದಲ್ಲಿ ಲಾಕ್ ಆಗಿ ಬಂಧಿತರಾದ ದರೋಡೆಕೋರರು.

ಶನಿವಾರ ತಡರಾತ್ರಿ ಸುಮಾರು 1.30 ಸುಮಾರಿಗೆ ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ಕಟ್ಟಡವೊಂದರ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್‌ಗೆ ಕೇರಳ ಮೂಲದ ಮೂವರು ದರೋಡೆಕೋರರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಮಳಿಗೆಯ ಬೀಗ ಒಡೆದು, ಸಿಸಿ ಕ್ಯಾಮರಾವನ್ನು ಒಡೆದು ಹಾಕಿದಾಗ ಸೈರನ್ ಮೊಳಗಿದೆ. ಇದು ಮುತ್ತೂಟ್ ಫೈನಾನ್ಸ್‌ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದಾರೆ. ಸ್ಥಳಕ್ಕೆ ಕೊಣಾಜೆ ಪೊಲೀಸರು ಧಾವಿಸಿದ್ದಾರೆ. ಈ ವೇಳೆ ಬೆದರಿದ ದರೋಡೆಕೋರರಲ್ಲಿ ಓರ್ವನು ಮೇಲಿನಿಂದ ಹಾರಿದಾಗ ಪೊಲೀಸರು ಹಾಗೂ ಸ್ಥಳೀಯರು ಹಿಡಿದಿದ್ದಾರೆ. ಮತ್ತೋರ್ವನು ಕಟ್ಟಡದಲ್ಲಿ ಅಡಗಿ ಕುಳಿತು ಸಿಕ್ಕಿಬಿದ್ದಿದ್ದಾನೆ. ಇನ್ನೋರ್ವನು ತಪ್ಪಿಸಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಗಳು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಜನವರಿ ತಿಂಗಳಲ್ಲಿ ಕೆ.ಸಿ.ರೋಡ್ ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ನಡೆದಿದ್ದ ದರೋಡೆಯು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ನಡೆಯಲಿದ್ದ ಸಂಭವನೀಯ ದರೋಡೆ ಪ್ರಕರಣವನ್ನು ಪೊಲೀಸರು ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!