ತಿರುವನಂತಪುರಂ (ಕೇರಳ): ಹಿರಿಯ ಕಾಂಗ್ರೆಸ್ ನಾಯಕ ಹಾಗು ಕೇರಳ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಉಮ್ಮನ್ ಚಾಂಡಿ ಅವರು ಇಂದು (ಮಂಗಳವಾರ) ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ 4.25ಕ್ಕೆ ಕೊನೆಯುಸಿರೆಳೆದಿದ್ದಾರೆ. ಮಾಜಿ ಸಿಎಂ ನಿಧನದ ಸುದ್ದಿಯನ್ನು ಪುತ್ರ ಚಾಂಡಿ ಉಮ್ಮನ್ ಅವರು ಫೇಸ್‌ಬುಕ್ ಪೋಸ್ಟ್ ಮೂಲಕ “ಅಪ್ಪಾ ಮೃತಪಟ್ಟರು” ಎಂದು ಬರೆದು ತಿಳಿಸಿದ್ದಾರೆ. ಈ ವರ್ಷಾರಂಭದಲ್ಲಿ ನ್ಯೂಮೋನಿಯಾ ಬಾಧಿಸಿದ ಹಿನ್ನೆಲೆಯಲ್ಲಿ ಚಾಂಡಿ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…