ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕರ್ತವ್ಯ ಲೋಪ, ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಅಮಾನತು

ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾ‌ರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ಉದ್ಯಾನ ಮತ್ತು ಬಯಲು ಜಾಗದ ವಲಯದಿಂದ ವಾಣಿಜ್ಯ ವಲಯಕ್ಕೆ ಭೂ ಉಪಯೋಗ ಬದಲಾವಣೆಯ ಕಡತದಲ್ಲಿ ಸರ್ವೆ ನಕ್ಷೆ ಸೇರಿದಂತೆ ವಿವಿಧ ದಾಖಲೆಗಳನ್ನು ನಿಯಮ ಮೀರಿ ನಕಲಿಯಾಗಿ ಸೃಷ್ಟಿಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಉಡುಪಿ ಶಾಸಕರು ಮನವಿ ಮಾಡಿದ್ದರು.

ಈ ವಿಚಾರಗಳ ಬಗ್ಗೆ ಸೂಕ್ತ ಸಮಜಾಯಿಷಿ ನೀಡುವಂತೆ ಮಹೇಶ್ ಚಂದ್ರ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಅದಕ್ಕೆ ತೃಪ್ತಿಕರವಾದ ಸಮಜಾಯಿಷಿ ಸಲ್ಲಿಕೆಯಾಗದೆ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿಯವರು ಮೇಲಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆ ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಆಗಿರುವ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರನ್ನು ಸರಕಾರ ಮರು ನೇಮಕ ಮಾಡಿ ಆದೇಶ ಮಾಡಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!