ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : 2 ದಿನ ರಾಜ್ಯದಲ್ಲಿ ಭಾರೀ ಮಳೆ ಅಲರ್ಟ್

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಹಲವು ಕಡೆಗಳಲ್ಲಿ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

 

ಯುಗಾದಿ ಹಬ್ಬದ ದಿನವಾದ ಭಾನುವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು ಜನರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಭಾನುವಾರ ಸಂಜೆ ಹುಬ್ಬಳ್ಳಿ ನಗರದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿದ್ದು ರಸ್ತೆಗಳು ತುಂಬಿ ಹರಿದವು. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.

ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಾರ್ಚ್ ಎರಡನೇ ವಾರದಿಂದಲೇ ರಾಜ್ಯದ ಹಲವು ಕಡೆಗಳಲ್ಲಿ ವಸಂತ ಮಳೆ ಆರಂಭವಾಗಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಹಲವು ಕಡೆಗಳಲ್ಲಿ ಈಗಾಗಲೇ ಮಳೆಯಾಗಿದೆ. ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದ್ದು, ಈ ಬಾರಿ ಹಿಂಗಾರು ಮಳೆ ದುರ್ಬಲವಾಗಿರಬಹುದು ಎಂದು ಅಂದಾಜಿಸಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!