ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಹಲವು ಕಡೆಗಳಲ್ಲಿ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಯುಗಾದಿ ಹಬ್ಬದ ದಿನವಾದ ಭಾನುವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು ಜನರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಭಾನುವಾರ ಸಂಜೆ ಹುಬ್ಬಳ್ಳಿ ನಗರದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿದ್ದು ರಸ್ತೆಗಳು ತುಂಬಿ ಹರಿದವು. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.
ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಾರ್ಚ್ ಎರಡನೇ ವಾರದಿಂದಲೇ ರಾಜ್ಯದ ಹಲವು ಕಡೆಗಳಲ್ಲಿ ವಸಂತ ಮಳೆ ಆರಂಭವಾಗಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಹಲವು ಕಡೆಗಳಲ್ಲಿ ಈಗಾಗಲೇ ಮಳೆಯಾಗಿದೆ. ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದ್ದು, ಈ ಬಾರಿ ಹಿಂಗಾರು ಮಳೆ ದುರ್ಬಲವಾಗಿರಬಹುದು ಎಂದು ಅಂದಾಜಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…