ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್‌ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್‌ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.
ಚೆಪಾಕ್‌ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್‌ಕಾಸ್ಟ್‌ನಲ್ಲಿ ಎಬಿಡಿ ಅರ್‌ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್‌ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್‌ಗಳು, ಬ್ಯಾಟರ್‌ಗಳು ಅಥವಾ ಫೀಲ್ಡರ್‌ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್‌ಸಿಬಿ ಉತ್ತಮ ಆರಂಭ ಮಾಡಿದೆ.
ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್‌ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್ ಹೊಂದಿರುವ ಏಕೈಕ ತಂಡ. ಆರ್‌ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್ ಪಾಟಿದಾರ್ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…