ಇತರೆ

ಕೃಷಿ ವಿಜ್ಞಾನ ಕೇಂದ್ರ  ಹಾಗೂ ಕೃಷಿ ಇಲಾಖೆ ಮೂಡಬಿದಿರೆ ಸಹಯೋಗದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ ಯ 95 ನೇ ಸಂಸ್ಥಾಪನಾ ದಿನಾಚರಣೆ

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಕೃಷಿ ವಿಜ್ಞಾನ ಕೇಂದ್ರ  ಹಾಗೂ ಕೃಷಿ ಇಲಾಖೆ ಮೂಡಬಿದಿರೆ ಸಹಯೋಗದಲ್ಲಿ ರೈತ ಸಂಪರ್ಕ ಕೇಂದ್ರ ಮೂಡುಬಿದರೆ ಇಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ ಯ 95 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರೈತರಿಗೆ ಕೃಷಿ ತಂತ್ರಜ್ಞಾನಗಳ ಮಾಹಿತಿ  ಹಾಗೂ ಪ್ರಧಾನ ಮಂತ್ರಿ ಬೆಳೆ ಯೋಜನೆ ಕುರಿತು ತರಬೇತಿ ಕಾರ್ಯಕ್ರಮ ವನ್ನು  ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ  ಮಂಗಳೂರಿನ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಟಿ. ಜೆ. ರಮೇಶ ರವರು ಸ್ಥಳ ನಿರ್ದಿಷ್ಟ ತಂತ್ರಜ್ಞಾನ ಗಳ ಅಳವಡಿಕೆಗೆ ಹಾಗೂ ಕೃಷಿ   ಸಂಭದಿತ ತಂತ್ರಜ್ಞಾನ ಬಳಕೆ, ಮೊಬೈಲ್ ಆಪ್  ಬಳಕೆ ಮಾಡುವಂತೆ ರೈತರಿಗೆ ತಿಳಿಸಿದರು. ಡಾ.ಕೇದಾರನಾಥ ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಭಾಗವಹಿಸಿ ಭತ್ತ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಕಂಡು ಬರುವ ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ವಿಜ್ಞಾನಿಗಳು ಹುಳಿ ಮಣ್ಣು ನಿರ್ವಹಣೆ ಮತ್ತು ಸಮರ್ಪಕ ರಸಗೊಬ್ಬರಗಳ ಸೂಕ್ತ ಮತ್ತು ಸಮರ್ಪಕ  ಬಳಕೆ ಮಾಹಿತಿ ನೀಡಿದರು.ಡಾ.ಹರೀಶ್ ಶಣೈ   ಬತ್ತದ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಮತ್ತು ಹೊಸ ಬತ್ತದ ತಳಿಗಳ ಕುರಿತು ಮಾಹಿತಿ ನೀಡಿದರು. ಕರಾವಳಿ ಭಾಗದಲ್ಲಿ ಹೊಸ ಭತ್ತದ ತಳಿಗಳಾದ ಸೈಯಾದ್ರಿ ಪಂಚಮುಖಿ, ಸೈಯಾದ್ರಿ ಬ್ರಹ್ಮ, ಕೆಂಪು ಮುಕ್ತಿ ತಳಿಗಳು ಕರಾವಳಿ ಭಾಗದಲ್ಲಿ ಬೆಳೆಸಬಹುದಾಗಿದೆ ಎಂದರು. ಶ್ರೀ. ವಿ.ಎಸ್.ಕುಲಕರ್ಣಿ ಕೃಷಿ ಅಧಿಕಾರಿಗಳು ಅಧ್ಯಕ್ಷತೆಯನ್ನು ವಹಿಸಿ ಪ್ರಧಾನ್ ಮಂತ್ರಿ ಬೆಳೆ ವಿಮಾ ಯೋಜನೆ ಕುರಿತು ಮಾಹಿತಿ ನೀಡಿದರು. ವಿಮಾ ಅಧಿಕಾರಿಗಳಾದ ಸೋಮನಾಥ್ತ ಮತ್ತು ಪವನ್ ವಿಮೆ ಬಗ್ಗೆ ಮಾಹಿತಿ ಒದಗಿಸಿದರು, ರೈತರು ಇದರ ಸದ್ಬಳಕೆ ಮಾಡಬಹುದಾಗಿದ್ದು ಆಗಸ್ಟ್ 16ರ ಒಳಗಾಗಿ ವಿಮೆ ನೋಂದಣಿಗೆ  ಸೂಚಿಸಲಾಯಿತು  ಸಂಪರ್ಕ ಕೇಂದ್ರದ ಸಿಬ್ಬಂದಿಗಳಾದ  ಯಲ್ಲನ್ ಗೌಡ, ಅನಾ ಲೋಬೊ,  ಸುಜಯ, ಹರಿಣಾಕ್ಷಿ, ಜಯಂತಿ,ಹಾಗೂ ಕೃಷಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

 ಕೃಷಿ ಅಧಿಕಾರಿ ಕುಲಕರ್ಣಿಯವರು ಸ್ವಾಗತ ಮತ್ತು ವಂದನಾರ್ಪಣೆಗೆದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…

10 hours ago

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…

10 hours ago

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…

11 hours ago

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…

11 hours ago

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

1 day ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

1 day ago