ಪದನ್ನಕ್ಕಾಡ್‌ನಲ್ಲಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ.

ಮೃತರನ್ನು ಹೊಸದುರ್ಗ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ವಿನೀಶ್ (35) ಎಂದು ಗುರುತಿಸಲಾಗಿದೆ. ಕರಿವೆಲ್ಲೂರಿನ ತಮ್ಮ ಮನೆಯಿಂದ ಬೈಕ್‌ನಲ್ಲಿ ಠಾಣೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಪದನ್ನಕ್ಕಾಡ್ ರೈಲ್ವೆ ಓವರ್‌ಬ್ರಿಡ್ಜ್‌ನಲ್ಲಿ, ನೀಲೇಶ್ವರದಿಂದ ಕಾಞಂಗಾಡ್‌ಗೆ ಹೋಗುತ್ತಿದ್ದ ಟ್ಯಾಂಕರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ವಿನೀಶ್ ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಮೃತ ಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಅವರ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೊಸದುರ್ಗ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.



