ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಮಾ. 30ರ ಬೆಳಿಗ್ಗೆ ಸಂಭವಿಸಿದೆ.
ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ತೆರಳುತ್ತಿದ್ದರು. ಚಿರೆಕಲ್‌ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋಗಿ ಕಾರಿಗೆ ಬ್ರೇಕ್ ಹಾಕಿಸಲು ಯತ್ನಿಸಿದ್ದಾರೆ. ಈ ವೇಳೆ ಬ್ರೇಕ್‌ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ಕಾರು ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಬಿದ್ದಿದೆ.
ಘಟನೆಯಲ್ಲಿ ಕಾರು ಮತ್ತು ಮನೆ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕಿ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಕ್ರೇನ್ ಮೂಲಕ ಕಾರನ್ನು ಮನೆಯ ಮೇಲ್ಛಾವಣಿಯಿಂದ ತೆಗೆಯಲಾಯಿತು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…