ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ : ಸಿಎಂಗೆ ತರಕಾರಿ ಬೆಳೆ ಉಡುಗೊರೆ ನೀಡಿದ ಕುತ್ಲೂರು ವಿದ್ಯಾರ್ಥಿಗಳು

ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿಗಳು, ಹಣ್ಣುಗಳು ಮತ್ತು ಜೇನುತುಪ್ಪವನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾನುವಾರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನೀಡಿದರು.

ಮಕ್ಕಳನ್ನು ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿದ್ಯಾರ್ಥಿಗಳೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಿದರು. ವಿದ್ಯಾರ್ಥಿಗಳನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದ ಶಾಲಾ ಸಿಬ್ಬಂದಿಯನ್ನು ಸಹ ಅವರು ಶ್ಲಾಘಿಸಿದರು. ಇನ್ನು ಶಾಲೆಗೆ ಎರಡು ಕಂಪ್ಯೂಟರ್ ಗಳನ್ನು ಹಾಗೂ ಪ್ರೊಜೆಕ್ಟರ್ ಉಡುಗೊರೆಯಾಗಿ ನೀಡಿದರು.

ಈ ಸಂವಾದದ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!