ಬೆಳ್ತಂಗಡಿ ತಾಲೂಕಿನಲ್ಲಿ ದಾಖಲಾದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಅವರಿಬ್ಬರನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳಿಗೆ ಸಂಬಂಧಿಸಿ ತನಿಖೆ ನಡೆಸಲಿದ್ದಾರೆ.
ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ೨೦೨೧ರ ನವೆಂಬರ್ ೮ರಂದು ಕೇರಳ ರಾಜ್ಯದ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ತ್ರಿಶೂರ್ ಜೈಲಿಗೆ ಹಾಕಲಾಗಿತ್ತು. ಬಿ.ಜಿ.ಕೃಷ್ಣಮೂರ್ತಿ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ೫೩ ಪ್ರಕರಣಗಳು ಹಾಗೂ ಸಾವಿತ್ರಿ ವಿರುದ್ಧ ೨೨ ಪ್ರಕರಣಗಳು ತನಿಖೆಯಲ್ಲಿವೆ.
೨೦೧೨-೨೦೧೩ರಲ್ಲಿ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಕಾರು, ಬೈಕಿಗೆ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಹತ್ಯಡ್ಕ ಗ್ರಾಮದ ಕುಂಟಲಪಲ್ಲೆಯಲ್ಲಿ ಗೋಡೆ ಬರಹ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಇವರಿಬ್ಬರನ್ನು ಪೊಲೀಸರು ಬಾಡಿ ವಾರೆಂಟ್ ಮೂಲಕ ತ್ರಿಶೂರ್ ಜೈಲಿನಿಂದ ಎ.೭ರಂದು ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.
ಕೇರಳ ರಾಜ್ಯದಿಂದ ಅಲ್ಲಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ನ್ಯಾಯಾಲಯವು ತನಿಖಾಧಿಕಾರಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ತಂಡಕ್ಕೆ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲು ಇಬ್ಬರು ನಕ್ಸಲರನ್ನು ಒಪ್ಪಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…