ಪೊಲೀಸ್ ಭದ್ರತೆ ನಡುವೆಯೇ ಯುವಕನೊಬ್ಬ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೊಬ್ಬ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್‌ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿದರು. ಈ ವೇಳೆ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…