ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಪಿಯುಸಿ ಪ್ರಥಮ ರ್ಯಾಂಕ್ ವಿಜೇತರಿಗೆ ಜಿಲ್ಲಾಧಿಕಾರಿ ಸನ್ಮಾನ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸನ್ಮಾನಿಸಿದರು.

 

ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಎಕ್ಸ್ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರವರನ್ನು ಮಂಗಳವಾರ ಮಧ್ಯಾಹ್ನ ಫಲಿತಾಂಶ ಬಂದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಕರೆಸಿದ ಜಿಲ್ಲಾಧಿಕಾರಿಗಳು ಶಾಲು ಹೊದಿಸಿ, ಹಾರ ಫಲಪುಷ್ಪ ನೀಡಿ ಸನ್ಮಾನಿಸಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ, ಕಲಿಕಾ ವಿಧಾನ, ಅಧ್ಯಯನ, ಶ್ರದ್ಧೆ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಸಾಧನೆಗೆ ಬೆನ್ನೆಲುಬಾಗಿ ನಿಂತ ಪಾಲಕರು, ಶಿಕ್ಷಕರನ್ನು ಜಿಲ್ಲಾಧಿಕಾರಿಗಳು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅಮೂಲ್ಯ ಕಾಮತ್ ಪಾಲಕರಾದ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧ ಕಾಮತ್, ದೀಪಶ್ರೀ ಪಾಲಕರಾದ ಅಶೋಕ್ ಎಸ್. ಮತ್ತು ಸುಮಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್.ಜಿ., ಇಲಾಖೆಯ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‍ಪರ್ಟ್ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಆನಂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!