ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸನ್ಮಾನಿಸಿದರು.
ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಎಕ್ಸ್ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರವರನ್ನು ಮಂಗಳವಾರ ಮಧ್ಯಾಹ್ನ ಫಲಿತಾಂಶ ಬಂದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಕರೆಸಿದ ಜಿಲ್ಲಾಧಿಕಾರಿಗಳು ಶಾಲು ಹೊದಿಸಿ, ಹಾರ ಫಲಪುಷ್ಪ ನೀಡಿ ಸನ್ಮಾನಿಸಿದರು.
ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ, ಕಲಿಕಾ ವಿಧಾನ, ಅಧ್ಯಯನ, ಶ್ರದ್ಧೆ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಸಾಧನೆಗೆ ಬೆನ್ನೆಲುಬಾಗಿ ನಿಂತ ಪಾಲಕರು, ಶಿಕ್ಷಕರನ್ನು ಜಿಲ್ಲಾಧಿಕಾರಿಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಮೂಲ್ಯ ಕಾಮತ್ ಪಾಲಕರಾದ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧ ಕಾಮತ್, ದೀಪಶ್ರೀ ಪಾಲಕರಾದ ಅಶೋಕ್ ಎಸ್. ಮತ್ತು ಸುಮಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್.ಜಿ., ಇಲಾಖೆಯ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‍ಪರ್ಟ್ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಆನಂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…