ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನವರೆಗೆ ತೆರಳುತ್ತಿದ್ದ ಪ್ಯಾಸೆಂಜರ್​ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ ರೈಲಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಂಗಳೂರು ಸೆಂಟ್ರಲ್ ರೈಲ್ವೆ‌ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಿದರು.

ಮಂಗಳೂರು ಸೆಂಟ್ರಲ್ -ಕಬಕ ಪುತ್ತೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜ‌ರ್ ರೈಲು ೦ ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜ‌ರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ ಹೊರಟು 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ಹೊರಟು ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!