ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನವರೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ ರೈಲಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಿದರು.
ಮಂಗಳೂರು ಸೆಂಟ್ರಲ್ -ಕಬಕ ಪುತ್ತೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು ೦ ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ ಹೊರಟು 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.
ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ಹೊರಟು ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…