ಜನ ಮನದ ನಾಡಿ ಮಿಡಿತ

Advertisement

ಉ. ಪ್ರದೇಶ : ಯುವತಿಗೆ ಅಮಲು ಕುಡಿಸಿ, ಕತ್ತು ಹಿಸುಕಿ ಕೊಂದು, ಸುಟ್ಟ ವ್ಯಕ್ತಿ

ವ್ಯಕ್ತಿಯೊಬ್ಬ ಮಹಿಳೆಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಸುಟ್ಟು ಹಾಕಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳಾದ ಶಿವೇಂದ್ರ ಯಾದವ್ (26) ಮತ್ತು ಆತನ ಸಹಾಯಕ ಗೌರವ್ (19) ಮೊದಲು ಆಸ್ತಿ ದಾಖಲೆಗಳನ್ನು ನೀಡಲು ಸಂತ್ರಸ್ತೆಗೆ ಕರೆ ಮಾಡಿ, ಆಕೆ ಬಂದ ಬಳಿಕ ಆಕೆಗೆ ಮದ್ಯ ಕುಡಿಸಿ, ಉಸಿರುಗಟ್ಟಿಸಿ ಕೊಂದು, ಸುಟ್ಟು ಹಾಕಿ, ಅರೆಬರೆ ಬೆಂದ ಶವವನ್ನು ನದಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಐದು ದಿನಗಳಿಂದ ಕಾಣೆಯಾಗಿದ್ದ ಅಂಜಲಿಯ ಶವ ಶನಿವಾರ ನದಿಯ ಬಳಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿಯು ತನ್ನ ತಂದೆ ಮತ್ತು ಹೆಂಡತಿಗೆ ವೀಡಿಯೊ ಕರೆ ಮಾಡಿ ಸಂತ್ರಸ್ತೆಯ ಶವವನ್ನು ತೋರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ಕುಟುಂಬ ಸದಸ್ಯರು ಚರಂಡಿಯ ಬಳಿ ಸುಟ್ಟು ಕರಕಲಾದ ಸ್ಕೂಟರ್ ಅನ್ನು ಕಂಡುಕೊಂಡ ನಂತರ ಆಕೆಯ ವ್ಯವಹಾರ ಪಾರ್ಟ್ನರ್ ಆಗಿದ್ದ ವ್ಯಕ್ತಿ ಮೇಲೆ ಕೊಲೆ ಆರೋಪ ಹೊರಿಸಿದ ನಂತರ ಪೊಲೀಸರು ತನಿಖೆ ಆರಂಭಿಸಿದರು.

ಆಕೆಯ ಸಹೋದರಿ ಕಿರಣ್ ಹೇಳುವಂತೆ ಆರೋಪಿಯು ಅಂಜಲಿಯಿಂದ ಭೂಮಿಗಾಗಿ 6 ​​ಲಕ್ಷ ರೂ.ಗಳನ್ನು ಪಡೆದಿದ್ದ. ನಂತರ ದಾಖಲೆಗಳನ್ನು ನೀಡುವ ನೆಪದಲ್ಲಿ ಅವನು ತನಗೆ ಕರೆ ಮಾಡಿ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಿದ್ದಾರೆ. ಪೊಲೀಸ್ ವಿಚಾರಣೆಯ ಸಮಯದಲ್ಲಿ ಯಾದವ್ ಮತ್ತು ಅವರ ಪತ್ನಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.

 

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!