ಮಹಾರಾಷ್ಟ್ರದ ನಾಗ್ಪುರದಲ್ಲಿ ಮಹಿಳಾ ವೈದ್ಯೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಐಪಿಎಸ್ ಅಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ನಾಗ್ಪುರದ ಇಮಾಮ್‌ವಾಡಾ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.
ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದ ವೇಳೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ವ್ಯಕ್ತಿಯ ಪರಿಚಯವಾಗಿದೆ. ವ್ಯಕ್ತಿಯು ಆ ಸಂದರ್ಭದಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದನು. ಇಬ್ಬರು ಸ್ನೇಹಿತರಾಗಿದ್ದು, ಆರೋಪಿಯು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಕ್ತಿ ಐಪಿಎಸ್ ಗೆ ಆಯ್ಕೆಯಾದ ಬಳಿಕ, ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಈ ಕುರಿತು ಮಹಿಳೆ ವ್ಯಕ್ತಿಯ ಪೋಷಕರನ್ನು ಸಂಪರ್ಕಿಸಿದ್ದು, ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಅಸಮಾಧನಾಗೊಂಡ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…