ಮಂಗಳೂರು ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಶನಿವಾರ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು- ಪ್ಯಾಸೆಂಜರ್ ರೈಲಿನ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಅವರು ‘ಮಂಗಳೂರು, ಬೆಂಗಳೂರು ಸಂಸ್ಕಾರ, ಸಂಸ್ಕೃತಿ ಮತ್ತು ಸಹಬಾಳ್ವೆಗೆ ದೇಶದಲ್ಲಿ ಹೆಸರು ಪಡೆದಿದೆ. ಕರಾವಳಿ ಭಾಗದ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದ ಅಭಿವೃದ್ಧಿ ಕಾರ್ಯ 19 ಕೋಟಿ ರೂ.ಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆಗಸ್ಟ್‌ನೊಳಗೆ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಮಾಸ್ಟರ್ ಪ್ಲಾನ್ ತಯಾರಾಗಿದ್ದು, ಟೆಂಡರ್ ಕರೆದು ಎರಡು ವರ್ಷಗಳಲ್ಲಿ ಲೋಕಾರ್ಪಣೆಯಾಗಲಿದೆ ಎಂದರು.
ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಅಮೃತ್ ಭಾರತ್ ಯೋಜನೆಯಡಿ 24 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಭಕ್ತಾದಿ ಗಳ ತಾಣವಾಗಿರುವ ಆ ನಿಲ್ದಾಣದಲ್ಲಿ ವಿಕಲಚೇತನರಿಗೂ ಪೂರಕವಾಗಿ ಎಕ್ಸಲೇಟರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸೆಪ್ಟಂಬರ್ 25ರೊಳಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಣಗೊಳ್ಳಲಿವೆ ಎಂದು ಸಚಿವ ಸೋಮಣ್ಣ ವಿವರ ನೀಡಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…