ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಮತ್ತೊಂದು ಬೆದರಿಕೆ ಬಂದಿದೆ.
ಮುಂಬೈ ಟ್ರಾಫಿಕ್ ಪೊಲೀಸ್ ವಿಭಾಗದ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಇಬ್ಬರು ನಾಯಕರಿಗೆ ಕೊಲೆ ಬೆದರಿಕೆ ಹಾಕಿದ್ದು, 26/11 ಮಾದರಿಯ ಮತ್ತೊಂದು ದಾಳಿಗೆ ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕ್ಷಿಪ್ರ ತನಿಖೆ ಆರಂಭಿಸಲಾಗಿದೆ.
ಜುಲೈ 12ರಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದ್ದು, ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ಳನ್ನು ವಾಪಸ್ ಕಳುಹಿಸದಿದ್ದರೆ 26/11 ರ ಮಾದರಿ ಭಯೋತ್ಪಾದಕ ದಾಳಿ ನಡೆಸಲಾಗುವುದು ಎಂದು ಹೇಳಲಾಗಿದೆ. ಇದಾದ ಬಳಿಕ ಇದೀಗ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಆರಂಭಿಸಿದ್ದಾರೆ.



