ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ವಿಜಯವಾಡದಿಂದ ತಂದಿದ್ದ ಗಾಂಜಾ ಮಾರಾಟಕ್ಕೆ ಯತ್ನ; ಓರ್ವನ ಬಂಧನ

 ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

ಭಟ್ಕಳ ಗುಲ್ಜಾರ್‌ ಸ್ಟ್ರೀಟ್‌ ನಿವಾಸಿ ಆರೀಬ್‌ ಅಹಮ್ಮದ್‌(31) ಬಂಧಿತ ಆರೋಪಿ. ಈತ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ‌.

5.75 ಲಕ್ಷ ಮೌಲ್ಯದ 7 ಕಿಲೋ 304 ಗ್ರಾಂ ತೂಕದ ಗಾಂಜಾ ವಶ

 

ಬಂಧಿತನಿಂದ 5.75 ಲಕ್ಷ ಮೌಲ್ಯದ 7 ಕಿಲೋ, 304 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಪೋನ್, 1520 ರೂ. ನಗದು ಸಹಿತ ಒಟ್ಟು 5,96,520 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯವಾಡದ ಸೈಕಲ್‌ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!