ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಭಟ್ಕಳ ಗುಲ್ಜಾರ್ ಸ್ಟ್ರೀಟ್ ನಿವಾಸಿ ಆರೀಬ್ ಅಹಮ್ಮದ್(31) ಬಂಧಿತ ಆರೋಪಿ. ಈತ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
5.75 ಲಕ್ಷ ಮೌಲ್ಯದ 7 ಕಿಲೋ 304 ಗ್ರಾಂ ತೂಕದ ಗಾಂಜಾ ವಶ
ಬಂಧಿತನಿಂದ 5.75 ಲಕ್ಷ ಮೌಲ್ಯದ 7 ಕಿಲೋ, 304 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಪೋನ್, 1520 ರೂ. ನಗದು ಸಹಿತ ಒಟ್ಟು 5,96,520 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯವಾಡದ ಸೈಕಲ್ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…