ಸಮುದಾಯದ ಯಾವುದೇ ವ್ಯಕ್ತಿ ಶಿಕ್ಷಕ ಎಂಬ ಪದಕ್ಕೆ ಸೆಳೆಯಾಗುತ್ತಾನೆ, ಶಿಕ್ಷಕರು ಶಿಸ್ತಿನಿಂದ ಕಾರ್ಯಪ್ರವರ್ತರಾದರೆ ಬಲಿಷ್ಠ ಸಮಾಜ ಕಟ್ಟಬಹುದು. ಶಿಕ್ಷಣ, ಶಿಕ್ಷಕ, ಶಿಸ್ತು, ಇವು ಮೂರು ಪರಸ್ಪರ ಹೊಂದಿಕೊಂಡು ಕಾರ್ಯಪ್ರವರ್ತರಾದಾಗ ಸಮುದಾಯ ಬಲಿಷ್ಠ ಗೊಳ್ಳುತ್ತದೆ ಎಂದು ಶ್ರೀ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪ್ರಾಧ್ಯಾಪಕ ಸಿ.ಎ. ಉದಯಾನಂದ ತಿಳಿಸಿದರು.
ಮಂಗಳೂರು ಶಿಕ್ಷಕರ ಸಹಕಾರಿ ಪತ್ತಿನ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳಿಗೆ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನಡೆದ ಆಡಳಿತಾತ್ಮಕ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ಶಿಕ್ಷಕರ ಸಹಕಾರಿ ಸಂಘದ ಬಗ್ಗೆ ಎಲ್ಲರಿಗೂ ಅಭಿಮಾನವಿದೆ ಗೌರವವಿದೆ. ಗತವೈಭವ ಮರಳಿ ತರಲು ನಿರ್ದೇಶಕರು, ಸಿಬ್ಬಂದಿಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕ ಎಂ.ಜೆ.ಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸಂಘದ ಅಧ್ಯಕ್ಷ ಕೆಎಂಕೆ ಮಂಜನಾಡಿ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್, ಅಲೋ ಸಿಯಸ್ ಡಿಸೋಜಾ , ಪ್ರಮೀಳಾ, ಜಾಯ್ಸ್ ಡಿಸೋಜಾ, ಜಗದೀಶ್ ಶೆಟ್ಟಿ, ಲ್ಯಾನ್ಸಿ ಸಿ. ತಾವ್ರೋ, ತ್ಯಾಗಮ್ ಹರೇಕಳ, ರಾಧಾಕೃಷ್ಣ ರಾವ್, ನಿರ್ದೇಶಕರಾದ ಉಸ್ಮಾನ್, ಹಿಲ್ಡಾ ಕ್ಲೆಮನ್ಸಿಯಾ ಪಿಂಟೋ, ರೀಟಾ ಕಾಟಿಪಳ್ಳ, ವಾಣಿ, ವನಿತಾ ಸುರೇಶ್, ತಿಪ್ಪೋಜಿ, ವಾಸುದೇವ ರಾವ್, ಅಂಬರೀಶ್, ಚಂದ್ರಶೇಖರ್, ರೂಪಾಕ್ಷ, ವಾಸುದೇವ ರಾವ್, ರಘುನಾಥ್ ರಾವ್, ಕಾರ್ಯನಿರ್ವಹಣಾಧಿಕಾರಿ ಶರ್ಮಿಳಾ, ವಿನಯ ಮೊದಲಾದವರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…