ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ ಕಾರ್ಯಕ್ರಮ ಹರಿದ್ವಾರದಲ್ಲಿ ರವಿವಾರ ಜರುಗಿತು.
ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಎಪ್ರಿಲ್ 8 ರಿಂದ 14 ರ ತನಕ ವಿಶೇಷ ಕಾರ್ಯಕ್ರಮಗಳು ಜರಗುತ್ತಿದ್ದು, ರವಿವಾರ ಎಪ್ರಿಲ್ 13 ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಎಪ್ರಿಲ್ 14 ರಂದು ವ್ಯಾಸಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ ಅಭಿಷೇಕ ನಡೆಯಲಿದೆ. ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಲಿದೆ. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹರಿಗುರು ಕೃಪೆಗೆ ಪಾತ್ರರಾಗಲು ದೇಶ, ವಿದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…