ಭಕ್ತಾದಿಗಳು ಮತ್ತು ಸಿಬ್ಬಂದಿಗೆ ಶಾಂತಿಯುತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಅಡಿಯಲ್ಲಿ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್‌ಗಳ ಮೇಲೆ ನಿಷೇಧ ಹೇರಿದೆ.
ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಎಂದು ಸರ್ಕಾರ ಆದೇಶ ಹೊರಡಿಸಿದೆ
ದೇವರ ದರ್ಶನಕ್ಕೆ ಎಂದು ಬರುವ ಭಕ್ತಾಧಿಗಳು ಮೊಬೈಲ್ ಬಳಕೆ ಮಾಡಿಕೊಂಡು ಫೋನ್ ನಲ್ಲಿ ಮಾತನಾಡುವುದು, ಮೊಬೈಲ್ ರಿಂಗ್ ಟೋನ್ ಗಟ್ಟಿಯಾಗಿ ಇಡುವುದು, ಇದು ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ಬರುವ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಇಲಾಖೆ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನ ಹಾಗೂ ಪೂಜೆಯ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ಗ ಳನ್ನು ಸ್ವಿಚ್ ಆಫ್ ಮಾಡಿ ದೇವರ ದರ್ಶನ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ತಮಿಳುನಾಡಿನ ದೇವಾಲಯಗಳಲ್ಲಿ ಈಗಾಗಲೇ ಈ ಕಾನೂನು ಜಾರಿಯಲ್ಲಿದ್ದು, ಕರ್ನಾಟಕದಲ್ಲಿ ಜಾರಿಗೆ ತರಲಾಗುತ್ತಿದೆ. ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಅನುಮತಿಸಲಾಗುವುದಿಲ್ಲ ಮತ್ತು ಪ್ರವಾಸಿಗರಿಗೆ ನಿಷೇಧದ ಬಗ್ಗೆ ತಿಳಿಸಲು ಸೂಚನಾ ಫಲಕಗಳನ್ನು ಅಳವಡಿಸಲಾಗುವುದು. ವಿಗ್ರಹಗಳ ಛಾಯಾಚಿತ್ರ ಮತ್ತು ಚಿತ್ರೀಕರಣಕ್ಕಾಗಿ ಫೋನ್‌ಗಳ ಸಂಭಾವ್ಯ ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿ, ಭದ್ರತಾ ಅಪಾಯಗಳು ಮತ್ತು ಕಳ್ಳತನಗಳಿಗೆ ಕಾರಣವಾಗುವ ಮೂಲಕ ನಿಷೇಧಕ್ಕೆ ವಿನಂತಿಸುವ ಬಹು ವಿಷಯಗಳನ್ನು ಗಣನೆಗೆ ತೆಗೆದುಕೊಂಡು ಈ ಕ್ರಮವನ್ನು ಜಾರಿಗೆ ತರಲಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…