ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ

ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ ಬಿಸಿರೋಡಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

 

ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಅನೇಕ ಆಚರಣೆಗಳು ನಡೆಯುತ್ತವೆ ಆದರೆ ಸರಕಾರಿ ಆಚರಣೆಗಳು ಸರಕಾರದ ಅದೇಶಕ್ಕೆ ಸೀಮಿತವಾಗಿದೆ. ಇದರ ಸದುಪಯೋಗ ಸಾಮಾನ್ಯ ಜನರಿಗೆ ಸಿಗುವಂತೆ ಆಗಬೇಕು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಬೇಕು ಎಂದು ತಿಳಿಸಿದರು. ಮಹಾನ್‌ ವ್ಯಕ್ತಿಗಳ ಜೀವನ ಚರಿತ್ರೆಯ ಬಗ್ಗೆ ನಾವು ಜೀವನದಲ್ಲಿ ಅಳವಡಿಸಿಕೊಳ್ಳಲು ಅವರು ತಿಳಿಸಿದರು.

ಅಂಬೇಡ್ಕರ್ ಭವನದಲ್ಲಿ ಸುಸಜ್ಜಿತ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸುವ ಸಲುವಾಗಿ ಸೀಲಿಂಗ್ ನ ವ್ಯವಸ್ಥೆ ಆಗಬೇಕಾಗಿದೆ, ಅದಕ್ಕೆ ಶಾಸಕರ ನಿಧಿಯಿಂದ ಹಣ ನೀಡುವುದಾಗಿ ಭರವಸೆ ನೀಡಿದರು.

ಕೇಪು ಕಲ್ಲಂಗಳ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಗುಣಶ್ರೀ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾತನಾಡಿದರು.
ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಬಿಸಿರೋಡಿನ ಸರ್ಕಲ್ ಬಳಿಯಿಂದ ಅಂಬೇಡ್ಕರ್ ಭವನದ ವರೆಗೆ ವಿಶೇಷ ಆಕರ್ಷಣೆಯ ಜಾಥ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಜಯಂತಿ ಎಸ್.ಪೂಜಾರಿ, ತಹಶಿಲ್ದಾರ್ ಅರ್ಚನಾ ಭಟ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಜಿಲ್ಲಾ ಮಟ್ಟದ ಜಾಗೃತಿ ಅಧಿಕಾರಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!