ಜನ ಮನದ ನಾಡಿ ಮಿಡಿತ

Advertisement

ಹುಬ್ಬಳ್ಳಿ : ಬಾಲಕಿಯನ್ನು ಕೊಂದ ಆರೋಪಿ ಎನ್ಕೌಂಟರ್ ಗೆ ಬಲಿ

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್​ ಕುಮಾರ್​ ಮೃತ ಆರೋಪಿ. ಹುಬ್ಬಳ್ಳಿಯ  ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್​ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಾಲಕಿ ಹೆತ್ತವರು ಕೂಲಿ ಕಾರ್ಮಿಕರಾಗಿದ್ದಾರೆ. ತಂದೆ ಪೇಂಟಿಂಗ್​ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದಾರೆ. ಮೃತ ಬಾಲಕಿಯ ತಾಯಿ ರವಿವಾರ ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದಾರೆ. ತಾಯಿ ಜೊತೆ ಬಾಲಕಿ ಕೂಡ ಹೋಗಿದ್ದಾಳೆ. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಮನೆಯ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ, ಇಲ್ಲಿಗೆ ಬಂದ ಆರೋಪಿ ರಿತೇಶ್​ ಕುಮಾರ್ ಬಾಲಕಿಗೆ ಚಾಕೊಲೇಟ್​ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್​ ಕುಮಾರ್ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್​ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್​ ಕುಮಾರ್​ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್​ ಕುಮಾರ್​​ನನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್​ ಕುಮಾರ್​​ ​ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!