ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಾಲಕಿ ಹೆತ್ತವರು ಕೂಲಿ ಕಾರ್ಮಿಕರಾಗಿದ್ದಾರೆ. ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದಾರೆ. ಮೃತ ಬಾಲಕಿಯ ತಾಯಿ ರವಿವಾರ ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದಾರೆ. ತಾಯಿ ಜೊತೆ ಬಾಲಕಿ ಕೂಡ ಹೋಗಿದ್ದಾಳೆ. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಮನೆಯ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ, ಇಲ್ಲಿಗೆ ಬಂದ ಆರೋಪಿ ರಿತೇಶ್ ಕುಮಾರ್ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.
ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಗುಂಡೇಟಿಗೆ ಆರೋಪಿ ಬಲಿ
ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್ ಕುಮಾರ್ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್ ಕುಮಾರ್ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್ ಕುಮಾರ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…